Index   ವಚನ - 1573    Search  
 
ಲಿಂಗಪ್ರಸಾದವ ಜಂಗಮಕ್ಕೆ ಕೊಡುವ ಕರ್ಮಿ ನೀ ಕೇಳಾ! ಜಂಗಮಪ್ರಸಾದವ ಲಿಂಗಕ್ಕೆ ಕೊಡುವ ಸುಧರ್ಮಿ ನೀ ಕೇಳಾ! ಲಿಂಗಪ್ರಸಾದವ ಜಂಗಮಕ್ಕೆ ಕೊಡುವದು ಅನಾಚಾರ; ಜಂಗಮದ ಪ್ರಸಾದವ ಲಿಂಗಕ್ಕೆ ಕೊಡುವದು ಸದಾಚಾರ. ಅದೆಂತೆಂದಡೆ: "ಲಿಂಗಾರ್ಪಿತಂ ಪ್ರಸಾದಂ ಚ ನ ದದ್ಯಾತ್ ಚರಮೂರ್ತಯೇ| ಚರಾರ್ಪಿತಂ ಪ್ರಸಾದಂ ಚ ತದ್ದದ್ಯಾತ್ ಲಿಂಗಮೂರ್ತಯೇ"|| ಎಂದುದಾಗಿ, ಇದು ಕಾರಣ, ಕೂಡಲಚೆನ್ನಸಂಗಯ್ಯಾ, ಜಂಗಮ ಮುಖದಲ್ಲಿ ಲಿಂಗ ನಿರಂತರ ಸುಖಿ.