Index   ವಚನ - 1578    Search  
 
ಲಿಂಗಮುಖವು ಜಂಗಮವೆಂದುದಾಗಿ, ತಾನು ಸತ್ಕಾಯಕದಿಂದ ಸಂಪಾದಿಸಿದ ಸತ್ಪದಾರ್ಥವ ಜಂಗಮಕ್ಕಿತ್ತು ತತ್‍ಪ್ರಸಾದವ ಭಕ್ತಿಯಿಂದ ಪಡೆದು ಸೇವಿಸಬಲ್ಲಡೆ ಅದು ಅಶನವೆಂಬೆ, ಈ ಕ್ರಮಕ್ಕೆ ಹೊರಗಾದುದೆ ಅನಶನವೆಂಬೆ, 'ಸಾಶನಾನಶನೇ ಅಭಿ' ಎಂದುದಾಗಿ. ಇಂತೀ ಅಶನ ಅನಶನಗಳ ಭೇದವನರಿಯದೆ ತನುವ ದಂಡಿಸದೆ ಮನವ ಖಂಡಿಸದೆ, ತನಗಾಗಿ ಜನವ ಮೋಸಂಗೈದು ತಂದು, ಮನೆಯಲ್ಲಿ ಮಡಗಿದ ದ್ರವ್ಯವು ಗುರುವಿಂಗೆ ಸಲ್ಲದು, ಲಿಂಗಕ್ಕೆ ಸಲ್ಲದು, ಜಂಗಮಕ್ಕೆ ಸಲ್ಲದಾಗಿ. ಇಂತೀ ಬಿನುಗು ಮಾನವನ ನಮ್ಮ ಕೂಡಲಚೆನ್ನಸಂಗಮದೇವನು ಹೀನಯೋನಿಯಲ್ಲಿ ಬರಿಸದೆ ಮಾಣ್ಬನೆ?