Index   ವಚನ - 1593    Search  
 
ʼಲಿ' ಕಾರವೆ ಶೂನ್ಯ, ಬಿಂದುವೆ ಲೀಲೆ, `ಗ' ಕಾರವೆ ಚಿತ್ತು. ಈ ತ್ರಿವಿಧದೊಳಗಿದೆ ಲಿಂಗವೆಂಬ ಸಕೀಲ. ಇದರ ಸಂಚವನಾವಾತ ಬಲ್ಲ ಆತನೆ ಲಿಂಗಸಂಗಿ. ಇದು ಕಾರಣ-ಲಿಂಗಾನುಭವಿಗಳ ಶ್ರೀಚರಣಕ್ಕೆ ನಮೋ ನಮೋ ಎಂಬೆ ಕೂಡಲಚೆನ್ನಸಂಗಮದೇವಾ.