Index   ವಚನ - 1602    Search  
 
ವಾರವೇಳು ಕುಲ ಹದಿನೆಂಟು ಎಂಬರಯ್ಯಾ. ಅದ ನಾವು ಅಲ್ಲವೆಂಬೆವು. ಇರುಳೊಂದು ವಾರ ಹಗಲೊಂದು ವಾರ, ಭವಿಯೊಂದು ಕುಲ, ಭಕ್ತನೊಂದು ಕುಲ, ನಾವು ಬಲ್ಲುದು ಕಾಣಾ ಕೂಡಲಚೆನ್ನಸಂಗಮದೇವಾ.