Index   ವಚನ - 1653    Search  
 
ಶಿಷ್ಯನ ಪೂರ್ವಾಶ್ರಯವ ಕಳೆವುದು ಗುರುವಿಗೆ ಸಹಜ. ಶಿಷ್ಯನು ತನ್ನ ಪೂರ್ವಾಶ್ರಯವ ಕಳೆದು ಶ್ರೀಗುರುಲಿಂಗವ ಮುಟ್ಟುವ ಪರಿ ಎಂತೋ? ಅರ್ಪಿತ ಹೋಗಿ, ಪ್ರಸಾದವನರಸುವುದೊ? ಕೂಡಲಚೆನ್ನಸಂಗಯ್ಯನಲ್ಲಿ, ಮಹಾಪ್ರಸಾದಿಯೆ ಬಲ್ಲ.