Index   ವಚನ - 1657    Search  
 
ಶೀಲಶೀಲವೆಂದೇನೊ, ಪಿಂಡ ಬ್ರಹ್ಮಾಂಡ ಸಂಯೋಗವಾಗದನ್ನಕ್ಕರ? ಅಷ್ಟತನುವಿನ ಗುಣಧರ್ಮವನರಿದು ಬಿಡದನ್ನಕ್ಕರ? ಅಕ್ರೋಧ ಸತ್ಯವಚನ ಸಾವಧಾನ ವ್ರತಾನುಗ್ರಹವಾಗದನ್ನಕ್ಕರ? "ಅಕ್ರೋಧಃ ಸತ್ಯವಚನಂ ಸಾವಧಾನೋ ದಮಃ ಕ್ಷಮಾ ಅನುಗ್ರಹಶ್ಚ ದಾನಂ ಚ ಶೀಲಮೇವ ಪ್ರಶಸ್ಯತೇ'' ಎಂದುದಾಗಿ, ಕೂಡಲಚೆನ್ನಸಂಗಮದೇವಯ್ಯಾ, ಶೀಲವೆಂಬುದು ಅಪೂರ್ವ.