Index   ವಚನ - 401    Search  
 
ಹಂದಿಯೂ ಮದಕರಿಯೂ ಒಂದೇ ದಾರಿಯಲ್ಲಿ ಸಂಧಿಸಿದಡೆ ಹಂದಿಗಂಜಿ ಮದಕರಿ ಕೆಲಕ್ಕೆ ಸಾರಿದಡೆ ಈ ಹಂದಿಯದು ಕೇಸರಿಯಪ್ಪುದೆ ಚೆನ್ನಮಲ್ಲಿಕಾರ್ಜುನಾ?