ವಚನ - 402     
 
ಹಗಲಿನ ಕೂಟಕ್ಕೆ ಹೋರಿ ಬೆಂಡಾದೆ; ಇರುಳಿನ ಕೂಟದಲ್ಲಿ ಇಂಬರಿದು ಹತ್ತಿದೆ. ಕನಸಿನಲ್ಲಿ ಮನಸಂಗವಾಗಿ ಮೈಮರೆದಿರ್ದೆ; ಮನಸ್ಸಿನಲ್ಲಿ ಮೈಮರೆದು ಒರಗಿದೆ. ಚೆನ್ನಮಲ್ಲಿಕಾರ್ಜುನನ ಕಂಡು ಕಣ್ದೆರೆದೆ.