ಶ್ರೀಗುರು ಶಿಷ್ಯನ ಭವಿಪೂರ್ವಾಶ್ರಯವಂ ಕಳೆದು
ಭಕ್ತನ ಮಾಡಿದ ಬಳಿಕ
ಆ ಭಕ್ತ ಹೋಗಿ ಜಂಗಮವಾಗಿ,
ಗುರುವಿನ ಮಠಕ್ಕೆ ಬಂದಡೆ
ಆ ಜಂಗಮವೆನ್ನ ಶಿಷ್ಯನೆಂದು
ಗುರುವಿನ ಮನದಲ್ಲಿ ಹೊಳೆದಡೆ
ಪಂಚಮಹಾಪಾತಕ.
ಆ ಜಂಗಮಕ್ಕೆ ಎನ್ನ ಗುರುವೆಂದು
ಮನದಲ್ಲಿ ಭಯಭೀತಿ ಹೊಳೆದಡೆ ರೌರವನರಕ.
ಇಂತೀ ಭೇದವ ಕೂಡಲಚೆನ್ನಸಂಗಯ್ಯನಲ್ಲಿ
ಶರಣರೆ ಬಲ್ಲರು.