ವಚನ - 404     
 
ಹಗಲು ನಾಲ್ಕು ಜಾವ ನಿಮ್ಮ ಕಳವಳದಲ್ಲಿಪ್ಪೆನು. ಇರುಳು ನಾಲ್ಕು ಜಾವ ಲಿಂಗದ ವಿಕಳಾವಸ್ಥೆಯಲ್ಲಿಪ್ಪೆನು. ಹಗಲಿರುಳು ನಿಮ್ಮ ಹಂಬಲದಲ್ಲಿ ಮೈಮರೆದೊರಗಿಪ್ಪೆನು. ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಒಲುಮೆ ನಟ್ಟು ಹಸಿವು ತೃಷೆ ನಿದ್ರೆಯ ತೊರೆದೆನಯ್ಯಾ.