Index   ವಚನ - 1696    Search  
 
ಸತಿಯ ಸಂಗವತಿಸುಖವೆಂದರಿದಡೇನು? ಗಣಸಾಕ್ಷಿಯಾಗಿ ವಿವಾಹವಾಗದನ್ನಕ್ಕರ? ಕಣ್ಣು ಕಾಂಬುದೆಂದಡೆ, ಕತ್ತಲೆಯಲ್ಲಿ ಕಾಂಬುದೆ ದೀಪವಿಲ್ಲದನ್ನಕ್ಕರ? 'ಸೂರ್ಯನ ಪ್ರಕಾಶದಿಂದ ಕಂಡು ತಾನೆ ಕಂಡೆ'ನೆಂಬ ಜಗದ ನಾಣ್ಣುಡಿಯಂತಾಯಿತ್ತು. ಅಂಗವ ಬಿಟ್ಟು ಆತ್ಮನುಂಟೆ? ಶಕ್ತಿಯ ಬಿಟ್ಟು ಶಿವನುಂಟೆ? ಇದು ಕಾರಣ-ಸ್ಥೂಲ ಸೂಕ್ಷ್ಮಕಾರಣ ತನುತ್ರಯವಿರಲು, ಇಷ್ಟ ಪ್ರಾಣ ಭಾವವೆಂಬ ತ್ರಿವಿಧಲಿಂಗಸಂಬಂಧ ಬೇಡವೆಂದಡೆ ಅಸಂಖ್ಯಾತ ಪ್ರಮಥಗಣಂಗಳೊಪ್ಪುವರೆ? ಕೂಡಲಚೆನ್ನಸಂಗಯ್ಯನಲ್ಲಿ ಇಷ್ಟಲಿಂಗಸಂಬಂಧವಿಲ್ಲದವರ ಮುಖವ ನೋಡಲಾಗದು ಪ್ರಭುವೆ.