Index   ವಚನ - 1699    Search  
 
ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನವೆಂದು ಶಿವಲಿಂಗದ ಮೇಲೆ ಪಂಚವಕ್ತ್ರವ ಸ್ಥಾಪಿಸುವ ಅನಾಚಾರಿಯ ಮಾತ ಕೇಳಲಾಗದು. ಇಂತಪ್ಪ ಲಿಂಗದ್ರೋಹಿಯ ತೋರದಿರಯ್ಯಾ, ಸಕಲ ನಿಃಕಲದಂತಹನೆ ಲಿಂಗವು? ಕೂಡಲಚೆನ್ನಸಂಗಯ್ಯನಲ್ಲಿ ಸರ್ವಾಂಗಲಿಂಗಿ ಬಸವಣ್ಣ ಬಲ್ಲ.