Index   ವಚನ - 1700    Search  
 
ಸಮಯದಲ್ಲಿ ಸಮ್ಮತನು ಆಚಾರದ ನೆಲೆಯನರಿದು, ಹೃದಯದ ಕತ್ತಲೆಯ ಉದಯದಲ್ಲಿಯೇ ಕಳೆದ. ಮುಟ್ಟುವುದ ಮುಟ್ಟದೆ ಕಳೆದ; ಮುಟ್ಟದುದ ಮುನ್ನವೆ ಕಳೆದ. ಅಯ್ಯಾ ಆಯ್ಯಾ ಎಂದಲ್ಲಿಯೆ ಕಲಿಯಾದ. ಕೇಸರಿಸಮ ಯೋಗ; ಐದರ ಮದಸೇನೆ ಮುರಿಯಿತ್ತು, ಎನ್ನೊಡೆಯ ಕೂಡಲಚೆನ್ನಸಂಗಯ್ಯ ಹಿಡಿವಡೆದ.