Index   ವಚನ - 1705    Search  
 
ಸರ್ವಸಂಗಪರಿತ್ಯಾಗ ಮಾಡಿದ ಶಿವಶರಣನ ಲೋಕದ ಸಂಸಾರಿಗಳೆಂತು ಮೆಚ್ಚುವರಯ್ಯಾ? ಊರೊಳಗಿರ್ದಡೆ [ಸಂಸಾರಿ] ಎಂಬರು, ಅಡವಿಯೊಳಗಿರ್ದಡೆ ಮೃಗನೆಂಬರು ಹೊನ್ನ ಬಿಟ್ಟಡೆ ದರಿದ್ರನೆಂಬರು, ಹೆಣ್ಣ ಬಿಟ್ಟಡೆ ನಪುಂಸಕನೆಂಬರು, ಮಣ್ಣ ಬಿಟ್ಟಡೆ ಪೂರ್ವಕರ್ಮಿ ಎಂಬರು, ಮಾತನಾಡದಿರ್ದಡೆ ಮೂಗನೆಂಬರು ಮಾತನಾಡಿದಡೆ ಜ್ಞಾನಿಗೇಕಯ್ಯಾ ಮಾತೆಂಬರು ನಿಜವನಾಡಿದಡೆ ನಿಷ್ಠುರಿಯೆಂಬರು, ಸಮತೆಯನಾಡಿದಡೆ ಅಂಜುವನೆಂಬರು. ಇದು ಕಾರಣ ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣ ಲೋಕದಿಚ್ಛೆಯ ನುಡಿಯ ಲೋಕದಿಚ್ಛೆಯ ನಡೆಯ.