Index   ವಚನ - 1737    Search  
 
ಹಸಿವು ತೃಷೆ ನಿದ್ರೆ ರೋಗಾದಿ ಬಾಧೆಗಳು ತನಗಾಗುತ್ತಿಹವೆಂಬ ಜೀವಭಾವವ ಮರೆದು, ಅವು ಲಿಂಗದ ಸದಿಚ್ಛೆಯಿಂದ ಅಂಗಕ್ಕುಂಟಾಗಿಹವೆಂಬ ಶಿವಭಾವವು ಸದಾಸನ್ನಿಹಿತವಾಗಿದ್ದಡೆ ಶರಣನ ಹಸಿವು ತೃಷೆ ಮುಂತಾದ ಸರ್ವಭಂಗವು ಲಿಂಗದಲ್ಲಿ ಲೀನವಾಗಿ, ಹುಟ್ಟುಗೆಟ್ಟು, ಸಾವಿನಸಂತಾಪವಿಲ್ಲದೆ ನಾನು ನನ್ನದೆಂಬಹಂಕಾರ ಮಮಕಾರಗಳು ಮರೆಮಾಚಿ ಸಂಚಿತ ಆಗಮಿ ಪ್ರಾರಬ್ಧವೆಂಬ ಕರ್ಮತ್ರಯ ಮುಂತಾದ ಪಾಶಗಳು ನಾಶವಾಗಿ, ನಿತ್ಯಮುಕ್ತಿಯಾಗುತ್ತಿಹುದಯ್ಯಾ. ಕೂಡಲಚೆನ್ನಸಂಗಮದೇವಾ, ಇದು ನಿಮ್ಮ ಭಕ್ತಿದೇವತೆಯ ಚಮತ್ಕೃತಿಯೆಂದರಿದೆನು.