Index   ವಚನ - 1746    Search  
 
ಹುಸಿ ಕಳವು ಪರದಾರ ಹಿಂಸೆ ಅಧಿಕಾಶೆಗಳ ಕೂಡಿಸಿಕೊಂಡು ಇದ್ದು, ಅನ್ಯ ಅನಾಚಾರದಲ್ಲಿ ವರ್ತಿಸುವವರು, ತಮ್ಮ ಅಂಗದ ಮೇಲೆ ಕಟ್ಟಿಕೊಂಡಿದ್ದ ಲಿಂಗವು ಅದು ಲಿಂಗವಲ್ಲ. ಅವರು ಮಾಡುವ ದೇವಪೂಜೆ ನಿಚ್ಚದಂಡಕ್ಕೆ ಪ್ರಾಯಶ್ಚಿತ್ತವೆಂದು ಶಿವನ ವಾಕ್ಯ ಮೊದಲಾದ ಸಕಲಪುರಾತನರ ವಚನಂಗಳು ಮುಂದೆ ಸಾರಿ ಹೇಳಿಹವು. ಅದು ಕಾರಣ-ಕೂಡಲಚೆನ್ನಸಂಗಯ್ಯಾ, ಪ್ರಾಣಲಿಂಗದ ಸಂಬಂಧವಾದ ಸದ್ಭಕ್ತನು ಅನ್ಯಾಯ ಅನಾಚಾರದಲ್ಲಿ ವರ್ತಿಸುವವರ ಬಿಟ್ಟಿಹನು.