Index   ವಚನ - 12    Search  
 
ಫಣಿಯ ಹೆಡೆಯ ಮೇಲೆ, ಒಂದು ಮಣಿಮಾಡದ ಮಂಟಪ. ಒಬ್ಬರಿಗಲ್ಲದೆ ಇಬ್ಬರಿಗಿಂಬಿಲ್ಲ. ಗಂಡಹೆಂಡೆರಿಬ್ಬರಿಗೆ ಇಹ ತೆರನಾವುದು ? ತೆರಪಿಲ್ಲದುದ ಕಂಡು, ಗಂಡನ ಮಂಡೆಯ ಮೇಲೆ ಹೆಂಡತಿ ಅಡಗಿರಲಾಗಿ, ಬಂದಬಂದವರೆಲ್ಲರೂ ಅವಳ ಕಂಡು ಮನ ಸೋತು, ಗಂಡನ ಕೊಂದು, ಅವಳ ಕೊಂಡು ಹೋಹಾಗ, ಹುದುಗು ಹಿಂಗದೆ, ಇವರೆಲ್ಲರೂ ಕೊಂದಾಡಿ ಸತ್ತರು. ಇದರ ಸಂಗವಾರಿಗೂ ಚೋದ್ಯ, ಎನ್ನ ಗೂಡಿನ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ.