Index   ವಚನ - 415    Search  
 
ಹಾಲು ತುಪ್ಪವ ನುಂಗಿ ಬೇರಾಗಬಲ್ಲುದೆ? ಸೂರ್ಯಕಾಂತದ ಅಗ್ನಿಯನಾರು ಭೇದಿಸಬಲ್ಲರು? ಅಪಾರಮಹಿಮ ಚೆನ್ನಮಲ್ಲಿಕಾರ್ಜುನಾ, ನೀನೆನ್ನೊಳಡಗಿಪ್ಪ ಪರಿಯ ಬೇರಿಲ್ಲದೆ ಕಂಡು ಕಣ್ದೆರೆದೆನು.