Index   ವಚನ - 417    Search  
 
ಹಿಂಡನಗಲಿ ಹಿಡಿವಡೆದ ಕುಂಜರ ತನ್ನ ವಿಂಧ್ಯವ ನೆನೆವಂತೆ ನೆನೆವೆನಯ್ಯಾ. ಬಂಧನಕ್ಕೆ ಬಂದ ಗಿಳಿ ತನ್ನ ಬಂಧುವ ನೆನೆವಂತೆ ನೆನೆವೆನಯ್ಯಾ, ಕಂದಾ, ನೀನಿತ್ತ ಬಾ ಎಂದು ನೀವು ನಿಮ್ಮಂದವ ತೋರಯ್ಯಾ, ಚೆನ್ನಮಲ್ಲಿಕಾರ್ಜುನಾ.