Index   ವಚನ - 69    Search  
 
ನೋಡುವಲ್ಲಿ ನೆರೆ ಶೃಂಗಾರವಲ್ಲದೆ, ಕೂಡುವಲ್ಲಿ ಉಂಟೆ? ನುಡಿವಲ್ಲಿ ಮಾತಿನ ಬಲುಮೆಯಲ್ಲದೆ, ಸಂಸಾರವ ಸಾಧನವ ಮಾಡುವಲ್ಲಿ ಮುಟ್ಟದಿಪ್ಪುದುಂಟೆ? ನಡೆ ನುಡಿ ಸಿದ್ಧಾಂತವಾದ ಶರಣಂಗೆ ಪಡಿಪುಚ್ಚವಿಲ್ಲ, ಗುಡಿಯೊಡೆಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗದಲ್ಲಿ ಐಕ್ಯವಾದ ಶರಣಂಗೆ.