Index   ವಚನ - 426    Search  
 
ಹೆಣ್ಣು ಹೆಣ್ಣಾದಡೆ ಗಂಡಿನ ಸೂತಕ. ಗಂಡು ಗಂಡಾದಡೆ ಹೆಣ್ಣಿನ ಸೂತಕ. ಮನದ ಸೂತಕ ಹಿಂಗಿದಡೆ ತನುವಿನ ಸೂತಕಕ್ಕೆ ತೆರಹುಂಟೆ? ಅಯ್ಯಾ, ಮೊದಲಿಲ್ಲದ ಸೂತಕಕ್ಕೆ ಮರುಳಾಯಿತ್ತು ಜಗವೆಲ್ಲ. ಎನ್ನ ದೇವ ಚೆನ್ನಮಲ್ಲಿಕಾರ್ಜುನನೆಂಬ ಗರುವಂಗೆ ಜಗವೆಲ್ಲ ಹೆಣ್ಣು ನೋಡಾ ಅಯ್ಯಾ.