Index   ವಚನ - 427    Search  
 
ಹೆದರದಿರು ಮನವೆ, ಬೆದರದಿರು ತನುವೆ, ನಿಜವನರಿತು ನಿಶ್ಚಿಂತನಾಗಿರು. ಫಲವಾದ ಮರನ ಕಲ್ಲಲಿ ಇಡುವುದೊಂದು ಕೋಟಿ, ಎಲವದ ಮರನ ಇಡುವರೊಬ್ಬರ ಕಾಣೆ. ಭಕ್ತಿಯುಳ್ಳವರ ಬೈವರೊಂದು ಕೋಟಿ, ಭಕ್ತಿಯಿಲ್ಲದವರ ಬೈವರೊಬ್ಬರ ಕಾಣೆ. ನಿಮ್ಮ ಶರಣರ ನುಡಿಯೆ ಎನಗೆ ಗತಿ, ಸೋಪಾನ! ಚೆನ್ನಮಲ್ಲಿಕಾರ್ಜುನಾ.