Index   ವಚನ - 10    Search  
 
ಅರುವತ್ತುನಾಲ್ಕು ಶೀಲ, ಐವತ್ತಾರು ನೇಮ, ಮೂವತ್ತೆರಡು ಕೃತ್ಯ-ಇಂತಿವು ಕಟ್ಟಳೆಗೊಳಗಾದವು. ಮಿಕ್ಕಾದ ಪ್ರಮಥರೆಲ್ಲರು ಸ್ವತಂತ್ರಶೀಲರು. ಅಣುವಿಂಗಣು, ಘನಕ್ಕೆಘನ, ಮಹತ್ತಿಂಗೆ ಮಹತ್ತಪ್ಪ ಘನಶೀಲರುಂಟು. ಆರಾರ ಅನುವಿನಲ್ಲಿ ಅನುವ ಅನುಕರಿಸಿ, ಆರಾರ ಭಾವದಲ್ಲಿ ಬಂಧಿತನಾಗಿ ಸಿಕ್ಕಿದೆಯಲ್ಲಾ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವೆ.