Index   ವಚನ - 15    Search  
 
ಆಚೆಯ ನೀರ ಈಚೆಯಲ್ಲಿ ತೆಗೆವುದು ಚಿಲುಮೆಯಲ್ಲ; ಆಚೆಯಲ್ಲಿ ಕೇಳಿದ ಮಾತ ಈಚೆಯಲ್ಲಿ ನುಡಿದು ಮತ್ತಾಚೆಯಲ್ಲಿ ಬೆರೆಸುವನ ಭಕ್ತನಲ್ಲ; ಆತನ ಇದಿರಿನಲ್ಲಿ ಆತನ ಸತಿಯ ಅವ್ವಾ ಎಂದು, ಆತ ಸಂದಲ್ಲಿ ಸತಿ ಎಂಬ ಭಂಡರಿಗೇಕೆ ವ್ರತ ನೇಮ ನಿತ್ಯ? ಇಂತಿವರಲ್ಲಿ ಕಳೆದುಳಿಯಬೇಕು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವನರಿವುದಕ್ಕೆ.