Index   ವಚನ - 33    Search  
 
ಕಾಮಿಗೆ ವ್ರತವುಂಟೆ, ನಿಃಕಾಮಿಗಲ್ಲದೆ? ಕ್ರೋಧಿಗೆ ವ್ರತವುಂಟೆ, ಸಮಾಧಾನಿಗಲ್ಲದೆ? ಲೋಭಿಗೆ ವ್ರತವುಂಟೆ, ಉದಾರಿಗಲ್ಲದೆ? ಇಂತೀ ಕ್ಷಮೆ ದಮೆ ಶಾಂತಿ ಸಮಾಧಾನಸಂಪದ ಮುಂತಾಗಿ ಗುರುಲಿಂಗಜಂಗಮಕ್ಕೆ, ತನುಮನಧನದಲ್ಲಿ ನಿರತನಾಗಿ, ತನ್ನ ತ್ರಾಣಕ್ಕೆ ಇದ್ದಂತೆ ಚಿತ್ತಶುದ್ಧಾತ್ಮನಾಗಿ ಇಪ್ಪ ಮಹಾಭಕ್ತನೆ ಕೃತ್ಯವಿಲ್ಲದ ಶರಣ. ಆತನ ಪಾದ ಎನ್ನ ಹೃದಯದಲ್ಲಿ ಅಚ್ಚೊತ್ತಿದಂತಿಪ್ಪುದು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ಅವರುವ ಎತ್ತುಕಟ್ಟುವ ಗೊತ್ತಾಗಿಪ್ಪನು.