Index   ವಚನ - 46    Search  
 
ಗುರುವಾಗಿ ಬಂದು ತನುವ ಕೊರೆದಡೂ ಕೇಳೆ, ಲಿಂಗವಾಗಿ ಬಂದು ಮನದಲ್ಲಿ ಕುಳ್ಳಿರ್ದು ನಿಜಾಂಗವ ತೋರಿದಡೂ ಕೇಳೆ, ಜಂಗಮವಾಗಿ ಬಂದು ಬಯಲ ಬೆಳಗಿನಲ್ಲಿ ಒಳಗಾಗೆಂದಡೂ ಒಲ್ಲೆ. ಅದೆಂತೆಂದಡೆ: ಕುಟಿಲದಲ್ಲಿ ಬಂದು ವ್ರತವ ಕೆಡಿಸಿಹೆನೆಂದಡೆ, ಕುಟಿಲದ ದೇವರುಂಟೆ? ವ್ರತ ಮೊದಲು ಘಟ ಕಡೆಯಾಗಿ ಘಟಿಸುವೆನಲ್ಲದೆ, ಮೂರು ಕಿಸುಕುಳಕಾಗಿ ಘಟವ ಹೊರೆದಡೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ದೂರ.