Index   ವಚನ - 47    Search  
 
ಗುರುವಾದಡೂ ಆಚಾರ ಭ್ರಷ್ಟನಾದಡೆ ಅನುಸರಿಸಲಾಗದು. ಲಿಂಗವಾದಡೂ ಆಚಾರ ದೋಹಳವಾದಲ್ಲಿ ಪೂಜಿಸಲಾಗದು. ಜಂಗಮವಾದಡೂ ಆಚಾರ ಅನುಸರಣೆಯಾದಲ್ಲಿ ಕೂಡಲಾಗದು. ಆಚಾರವೆ ವಸ್ತು, ವ್ರತವೆ ಪ್ರಾಣ, ಕ್ರಿಯೆಯೆ ಜ್ಞಾನ, ಜ್ಞಾನವೆ ಆಚಾರ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ತಾನೆ.