Index   ವಚನ - 65    Search  
 
ತಾ ವ್ರತಿಯಾಗಿದ್ದಲ್ಲಿ ತನ್ನ ಸೀಮೆ ಒಳಗಾಗಿ, ಕಟಕ ಪಾರದ್ವಾರ ಹುಸಿ ಕೊಲೆ ಕಳವು ಅನ್ಯಾಹಾರ ಮುಂತಾದ ನಿಂದಕ ದುರ್ಜನ ಭವಿಸಂಗ ಉಳ್ಳವರ ತಂದೆತಾಯಿಯೆಂದು ಹೆಂಡಿರುಮಕ್ಕಳೆಂದು ಬಂಧುಬಳಗವೆಂದು ಅವರನು ಅಂಗಳದಲ್ಲಿ ಕೂಡಿಕೊಂಡಡೆ, ಅವರ ತಂದು ಕೊಳನಿಕ್ಕಿದಡೆ, ತಿಂಗಳು ಸತ್ತ ನಾಯಮಾಂಸವ ತಂದು ತಿಂದ ದೋಷ ತಪ್ಪದು. ಇದಕ್ಕೆ ಹಿಂದೆ ನೆನೆಯಲಿಲ್ಲ, ಮುಂದೆ ನೋಡಲಿಲ್ಲ. ಈ ತಪ್ಪು ಹೊತ್ತಲ್ಲಿಯೆ ಅಂದಿಗೆ ನೂರು ತುಂಬಿತ್ತೆಂದು ಅಂಗವ ಬಿಡಬೇಕು.ಅಂಗವ ಬಿಡದ ಭಂಡರ ಕಂಡಡೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗನೊಪ್ಪ.