Index   ವಚನ - 70    Search  
 
ದುಷ್ಟರಿಗಂಜಿ ಕಟ್ಟಿಕೊಳ್ಳಬಹುದೆ ಕಡ್ಡಾಯದ ವ್ರತವ? ಆ ವ್ರತದ ವಿಚಾರವೆಂತೆಂದಡೆ: ಅಲಗಿನ ತುಪ್ಪದ ಸವಿಗೆ ಲಲ್ಲೆಯಿಂದ ನೆಕ್ಕಿದಡೆ ಅಲಗಿನ ಧಾರೆ ನಾಲಗೆಯ ತಾಗಿ, ಆ ಜೀವ ಹಲುಬುವ ತೆರದಂತೆ. ಒಲವರವಿಲ್ಲದ ಭಕ್ತಿ, ಛಲವಿಲ್ಲದ ನಿಷ್ಠೆ, ಎಲವದ ಮರನ ಕಾಯ್ದ ವಿಹಂಗನಂತೆ. ಇಂತೀ ಸಲೆನೆಲೆಯನರಿಯದವನ ವ್ರತಾಚಾರ ಕೊಲೆ ಹೊಲೆ ಸೂತಕಕ್ಕೊಡಲಾಯಿತ್ತು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಹೊರಗಾದ ನೇಮ.