Index   ವಚನ - 98    Search  
 
ಭಕ್ತರ ಮನೆಯಲ್ಲಿ ಭಕ್ತರು ಬಂದು ಕಳವು ಪಾರದ್ವಾರವ ಮಾಡಿದರೆಂದು ಹೊರಹಾಯ್ಕಿ ಎಂದು ನುಡಿಯಬಹುದೆ? ಒಡೆಯರು ಭಕ್ತರ ನಿಂದೆಯ ಕೇಳೆನೆಂದು ತನ್ನೊಡವೆ ಒಡೆಯರು ಭಕ್ತರ ದ್ರವ್ಯವೆಂದು ಭಾವಿಸಿದಲ್ಲಿ ಮತ್ತೊಬ್ಬ ಅರಿಯದ ತುಡುಗುಣಿ ಮುಟ್ಟಿದಡೆ ಅವ ಕೆಡುವ. ಆಚಾರಕ್ಕೆ ಹೊರಗು, ತಾನರಿಯದಂತಿರಬೇಕು ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ವ್ರತಸ್ಥನ ನೇಮ.