Index   ವಚನ - 102    Search  
 
ಭವಿಯಲಾದ ಪಾಕವ ತಂದು ಮನೆಯಲ್ಲಿರಿಸಿಕೊಂಡು ಭುಂಜಿಸುತ್ತ ಅವರ ಮನೆಯ ಒಲ್ಲೆನೆಂಬುದು ವ್ರತಕ್ಕೆ ಹಾನಿ, ಪಂಚಾಚಾರಕ್ಕೆ ದೂರ, ಪಂಚಾಚಾರ ಶುದ್ಧತೆಗೆ ಹೊರಗು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ಅವರ ಬಲ್ಲನಾಗಿ ಒಲ್ಲನು.