Index   ವಚನ - 103    Search  
 
ಭಾಜನಕ್ಕೆ ಸರ್ವಾಂಗ ಮುಸುಕಿಟ್ಟಲ್ಲಿ ಸರ್ವವ್ಯಾಪಾರ ನಿರಸನವಾಗಿರಬೇಕು; ಸರ್ವಸಂಗವನೊಲ್ಲದೆ ಇರಬೇಕು. ಒಡೆಯರು ಭಕ್ತರಲ್ಲಿ ನಿಗರ್ವಿಯಾಗಿ ಬಂದು ನಿಂದುದ ಜಂಗಮಲಿಂಗವ ಮುಂದಿರಿಸಿ, ಅವರು ಕೈಕೊಂಡು ಮಿಕ್ಕ ಪ್ರಸಾದವ ಲಿಂಗಕ್ಕೆ ಅರ್ಪಿತವ ಮಾಡಿ, ಗುರುಲಿಂಗಜಂಗಮದಲ್ಲಿ ಸಂದುಸಂಶಯವಿಲ್ಲದೆ ಆಚಾರವೆ ಪ್ರಾಣವಾಗಿ ನಿಂದುದು ರಾಮೇಶ್ವರಲಿಂಗದಂಗ.