Index   ವಚನ - 104    Search  
 
ಭಾಜನಕ್ಕೆ ಸರ್ವಾಂಗವ ಬಾಸಣಿಸುವಾಗ ಅದು ಆ ಕುಂಭಕ್ಕೊ, ತನ್ನಂಗಕ್ಕೊ ಎಂಬುದನರಿತು, ಸರ್ವಾಂಗ ಪಾವಡವ ಕಟ್ಟುವ ವಿವರ: ಮನ, ಬುದ್ಧಿ, ಚಿತ್ತ, ಅಹಂಕಾರ ಎಂಬ ಚತುರ್ಭಾವದ ಸೆರಗಿನಲ್ಲಿ ಗುಹ್ಯೇಂದ್ರಿಯವಂ ಕಳೆದು, ಜಿಹ್ವೇಂದ್ರಿಯವೆಂಬ ಅಂಗ ಭಾಜನಕ್ಕೆ ಸರ್ವಾಂಗ ಪಾವಡವಂ ಕಟ್ಟಿ, ಮಣ್ಣೆಂಬ ಆಸೆಯ ಬಿಟ್ಟು, ಹೊನ್ನೆಂಬ ಆಸೆಯ ಬಿಟ್ಟು, ಹೆಣ್ಣೆಂಬ ಮೋಹದಲ್ಲಿ ಮಗ್ನವಾಗದೆ, ಮಣ್ಣೆಂಬ ಆಸೆಯ ಗುರುವಿನಲ್ಲಿ, ಹೊನ್ನೆಂಬ ಆಸೆಯ ಲಿಂಗದಲ್ಲಿ, ಹೆಣ್ಣೆಂಬ ಮೋಹವ ಜಂಗಮದಲ್ಲಿ, ಕೊಡುವ ವ್ರತವನರಿಯದೆ ಆಚಾರ ಅಂಗದಲ್ಲಿ ಇಂತೀ ವ್ರತನೇಮವಲ್ಲದ ಮಣ್ಣ ಮಡಕೆಯ ಗನ್ನದಲ್ಲಿ ಕಟ್ಟಿದಡೆ ಪ್ರಸನ್ನನ ವ್ರತದಣ್ಣಗಳೆಲ್ಲರು ಇದ ಚೆನ್ನಾಗಿ ತಿಳಿದು ನೋಡಲಾಗಿ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ವ್ರತ ನೇಮ ಹರಿತವಾಯಿತ್ತು.