Index   ವಚನ - 132    Search  
 
ವ್ರತಾಚಾರವ ಅವಧರಿಸಿದ ಭಕ್ತಂಗೆ ಕತ್ತಿ ,ಕೋಲು, ಅಂಬು, ಕಠಾರಿ, ಈಟಿ, ಕೊಡಲಿ ಮತ್ತಾವ ಕುತ್ತುವ ಕೊರವ ಹಾಕುವ, ಗಾಣ ಮುಂತಾಗಿ ದೃಷ್ಟದಲ್ಲಿ ಕೊಲುವ ಕೈದ ಮಾಡುತ್ತ, ಮತ್ತೆ ಅವ ವ್ರತಿಯೆಂದಡೆ ಮೆಚ್ಚುವರೆ ಪರಮಶಿವೈಕ್ಯರು, ಇಂತಿವ ಶ್ರುತದಲ್ಲಿ ಕೇಳಲಿಲ್ಲ, ದೃಷ್ಟದಲ್ಲಿ ಕಾಣಲಿಲ್ಲ, ಅನುಮಾನದಲ್ಲಿ ಅರಿಯಲಿಲ್ಲ. ಸ್ವಪ್ನದಲ್ಲಿ ಕಂಡಡೆ ಎನ್ನ ವ್ರತಕ್ಕದೇ ಭಂಗ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವಾದಡೂ ಒಲ್ಲೆನು.