Index   ವಚನ - 133    Search  
 
ವ್ರತಾಚಾರವೆಂದು ಹೆಸರಿಟ್ಟುಕೊಂಡಿಪ್ಪರಯ್ಯಾ! ವ್ರತವೆಂದೇನು ಆಚಾರವೆಂದೇನು! ಅನ್ಯರು ಮಾಡಿದ ದ್ರವ್ಯವನೊಲ್ಲದಿಪ್ಪುದು ವ್ರತವೆ? ಆರನು ಕರೆಯದಿಪ್ಪುದು ಆಚಾರವೆ! ಪರಸ್ತ್ರೀ ಪರಧನಂಗಳಲ್ಲಿ ನಿಂದೆಗೆ ಒಡಲಾಗದಿದ್ದುದೆ ವ್ರತ. ಸರ್ವಭೂತಹಿತನಾಗಿ ದಯವಿದ್ದುದೆ ಆಚಾರ. ಇಂತೀ ಕ್ರೀಯನರಿತು, ಕ್ರೀಯ ಶುದ್ಧತೆಯಾಗಿ ನಿಂದುದೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ನೇಮ.