Index   ವಚನ - 135    Search  
 
ವ್ರತಿಗಳ ಮನೆಗೆ ವ್ರತಿಗಳು ಬಂದಲ್ಲಿ ಎನ್ನ ಮನೆಗೆ ಇವರು ಬಂದರೆಂದು ಭಿನ್ನಭಾವವಾದಾಗಲೆವ್ರತಕ್ಕೆ ದೂರ, ಆಚಾರಕ್ಕೆ ಕೊರತೆ. ತಮ್ಮ ಮನೆಗೆ ತಾವು ಬಂದರೆಂದು ಅನ್ಯಭಿನ್ನವಿಲ್ಲದೆ ಅರ್ಥ ಪ್ರಾಣ ಅಭಿಮಾನವೆಂದು ಕಟ್ಟುಮಾಡಿದಡೆ ಸಮಯಾಚಾರಕ್ಕೆ ದೂರ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಒಪ್ಪದ ನೇಮ.