Index   ವಚನ - 144    Search  
 
ಸರ್ವ ಇಂದ್ರಿಯಗಳ ಒಂದು ಮುಖವ ಮಾಡಿ ಸರ್ವ ಮೋಹಂಗಳಲ್ಲಿ ನಿರ್ಮೋಹಿತನಾಗಿ, ಅಂಗದಿಚ್ಫೆಯ ಮರೆದು ವ್ರತವೆಂಬ ಆಚಾರ ಲಿಂಗವ ಧರಿಸಬೇಕಲ್ಲದೆ ತನುವಿಗೆ ಬಂದಂತೆ ಮುಟ್ಟಿ, ಮನಕ್ಕೆ ಬಂದಂತೆ ಹರಿದು, ನಾನಿಲ್ಲಿ ಒಬ್ಬ ಶೀಲವಂತನಿದ್ದೇನೆ ಎಂದು ಕಲಹಟ್ಟಿಯಂತೆ ಕೂಗುತ್ತ ಕೊರಚುತ್ತ ಅಲ್ಲಿ ಬೊಬ್ಬಿಡುತ್ತ ಶೂಲವನೇರುವ ಕಳ್ಳನಂತೆ ಬಾಹ್ಯದಲ್ಲಿ ಬಾಯಾಲುವ, ಮನದಲ್ಲಿ ಸತ್ತೆಹೆನೆಂಬ ಸಂದೇಹದವನಂತೆ ಸಾಯದೆ, ಹೊರಗಣ ಕ್ರೀ ಶುದ್ಭವಾಗಿ, ಒಳಗಳ ಆತ್ಮ ಶುದ್ಧವಾಗಿ, ಉಭಯ ಶುದ್ಧವಾಗಿಪ್ಪುದು ಪಂಚಾಚಾರ ನಿರುತ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಸರ್ವಾಂಗಭರಿತನು.