Index   ವಚನ - 1    Search  
 
ಅಂಗಕ್ಕಾಚಾರ ಮನಕ್ಕೆ ಜ್ಞಾನ ಸಮರಸಾದ್ವೈತವಾದ ಮತ್ತೆಪುನರಪಿ ಪುನರ್ದೀಕ್ಷೆಯುಂಟೆ? ಗರುಡಿಯಲ್ಲಿ ಕೋಲಲ್ಲದೆ, ಕಾಳಗದಲ್ಲಿ ಉಂಟೆ ಕೋಲು? ಭವಿಗೆ ಮೇಲುವ್ರತ ಪುನರ್ದೀಕ್ಷೆಯಲ್ಲದೆ, ಭಕ್ತರಿಗುಂಟೆ? ವ್ರತತಪ್ಪಿ ಅನುಗ್ರಹವಿಡಿದ ನರಕಿಗಳಿಗೆ ಮುಕ್ತಿ ಇಲ್ಲ ಎಂದೆ ಅಮುಗೇಶ್ವರಲಿಂಗದಲ್ಲಿ.