Index   ವಚನ - 3    Search  
 
ಅಂಗದ ಮೇಲೆ ಲಿಂಗವಿಲ್ಲದವರಲ್ಲಿ ಲಿಂಗಾರ್ಪಿತವ ಬೇಡಲೇಕೆ? ಅಂಗದ ಮೇಲೆ ಲಿಂಗವುಳ್ಳ ಲಿಂಗವಂತರಲ್ಲಿ ಲಿಂಗಾರ್ಪಿತವ ಬಿಡಲೇತಕ್ಕೆ? ಜಾತಿಗೋತ್ರವನೆತ್ತಿ ನುಡಿಯಲೇಕೆ? ಸಹಜ ಶಿವಭಕ್ತರೆಂದು, ಶೀಲವಂತರೆಂದು, ವ್ರತಾಚಾರಿಗಳೆಂದು,ವ್ರತಭ್ರಷ್ಟರೆಂದು ಅವರ ಕುಲ ಛಲವ ಕೇಳಿಕೊಂಡು ಆಚಾರವುಳ್ಳವರು ಅನಾಚಾರಿಗಳು ಎಂದು ಬೇಡುವ ಭಿಕ್ಷವ ಬಿಡಲೇತಕ್ಕೆ? ಮದ್ಯ ಮಾಂಸವ ಭುಂಜಿಸುವವರು ಅನಾಚಾರಿಗಳು. ಆವ ಕುಲವಾದಡೇನು? ಅಂಗದ ಮೇಲೆ ಲಿಂಗವುಳ್ಳವರೆಲ್ಲರು ಆಚಾರವುಳ್ಳವರೆಂಬೆನಯ್ಯಾ; ಅಮುಗೇಶ್ವರಲಿಂಗಕ್ಕೆ ಅವರೆ ಸದ್ಭಕ್ತರೆಂಬೆನಯ್ಯಾ.