Index   ವಚನ - 5    Search  
 
ಅನುಭಾವಿ ಅನುಭಾವಿಗಳೆಂಬ ಅಜ್ಞಾನಿಗಳ ಮುಖವ ನೋಡಲಾಗದು. ಕಂಗಳ ಮುಂದಣ ಕಾಮ, ಮನದ ಮುಂದಣ ಆಸೆ, ಅಂಗದಲ್ಲಿ ಅಹಂಕಾರವಾಗಿಪ್ಪವರ ಅನುಭಾವಿಗಳೆಂಬೆನೆ? ಸೂಳೆಯ ಮನೆಯಲ್ಲಿಪ್ಪ ಗವುಡಿಯಂತೆ ತಮ್ಮ ತಮ್ಮ ಹಿರಿಯತನವ ಮುಂದುಗೊಂಡು ಕುರಿಗಳಂತೆ ತಿರುಗುವ ಜಡರುಗಳ ಅನುಭಾವಿಗಳೆಂಬೆನೆ? ಹತ್ತೈದ ಕೂಡಿಕೊಂಡು ಇಕ್ಕಿ ಎರೆವವರ ಮನೆಗೆ ಹೋಗಿ, ಭಕ್ತಿಬಿನ್ನಹವ ಕೈಕೊಂಡಡೆ ಬೆಕ್ಕು ಹಾಲುಕುಡಿದಂತೆ. ಅತ್ಯತಿಷ್ಠದ್ದಶಾಂಗುಲನೆಂದು ಘಟವ ಹೊರೆವ ಮಿಟ್ಟೆಯ ಭಂಡರು ಕಟ್ಟಿಗೆ ಮಣ್ಣ ಹಾಕಿ ಹೊಟ್ಟೆಯ ಹೊರೆವವನಂತೆ. ಇಷ್ಟಲಿಂಗವನರಿಯದೆ ಸತ್ಯರೆಂದು ಘಟವ ಹೊರೆವ ಘಟಕರ್ಮಿಗಳ ಮುಖವ ನೋಡಲಾಗದು ಅಮುಗೇಶ್ವರಲಿಂಗವೆ.