Index   ವಚನ - 6    Search  
 
ಅನುಭಾವಿಗೆ ಅಂಗ ಶೃಂಗಾರವುಂಟೆ? ಅನುಭಾವಿಗೆ ಕಾಮ ಕ್ರೋಧವುಂಟೆ? ಅನುಭಾವಿಗೆ ನಾಹಂ ಕೋಹಂ ಸೋಹಂ ಎಂಬ ಭ್ರಾಂತಿನ ಭ್ರಮೆಯುಂಟೆ? ಅನುಭಾವಿಗೆ ನನ್ನವರು ತನ್ನವರೆಂಬ ಗನ್ನಗದಕಿನ ಮಾತುಂಟೆ? ಅನುಭಾವಿಗಳೆಂಬವರು ಅಲ್ಲಿಗಲ್ಲಿಗೆ ತಮ್ಮ ಅನುಭಾವಂಗಳ ಬೀರುವರೆ? ಅನುಭಾವಿಗಳ ಪರಿಯ ಹೇಳಿಹೆ ಕೇಳಿರಣ್ಣಾ; ನೀರಮೇಲಣ ತೆಪ್ಪದಂತೆ, ಸಮುದ್ರದೊಳಗಣ ಬೆಂಗುಂಡಿನಂತೆ ಇರಬಲ್ಲಡೆ ಅನುಭಾವಿಗಳೆಂಬೆನಯ್ಯಾ. ವಚನಂಗಳ ಓದಿ ವಚನಂಗಳ ಕೇಳಿ ಕಂಡ ಕಂಡ ಠಾವಿನಲ್ಲಿ ಬಂಡುಗೆಲೆವ ಜಗಭಂಡರ, ಆತ್ಮತೇಜಕ್ಕೆ ತಿರುಗುವ ವೇಷಧಾರಿಗಳ ಕಂಡು ಅನುಭಾವಿಗಳೆಂದಡೆ ಅಘೋರ ನರಕ ತಪ್ಪದು ಕಾಣಾ, ಅಮುಗೇಶ್ವರಾ.