Index   ವಚನ - 8    Search  
 
ಅರಿಯಬಲ್ಲಡೆ ವಿರಕ್ತನೆಂಬೆನು. ಆಚಾರವನರಿದಡೆ ಅಭೇದ್ಯನೆಂಬೆನು. ಸ್ತುತಿ ನಿಂದೆಗೆ ಹೊರಗಾದಡೆ ಸುಮ್ಮಾನಿ ಎಂಬೆನು. ಘನತತ್ವವನರಿದು ಶಿಶು ಕಂಡ ಕನಸಿನಂತೆ ಇದ್ದಡೆ ಶಿವಜ್ಞಾನಿ ಎಂಬೆನಯ್ಯಾ ಅಮುಗೇಶ್ವರಾ.