Index   ವಚನ - 9    Search  
 
ಅರಿವು ಆಚಾರವುಳ್ಳ ಸಮ್ಯಜ್ಞಾನಿಗೆ ಹೇಳುವೆನಲ್ಲದೆ, ಜಗದಲ್ಲಿ ನಡೆವ ಜಂಗುಳಿಗಳಿಗೆ ನಾ ಹೇಳುವನಲ್ಲ. ಆರು ಸ್ಥಲವನರಿದ ಲಿಂಗೈಕ್ಯಂಗೆ ಅಂಗದ ಮೇಲಣ ಲಿಂಗ ಭಿನ್ನವಾಗಲು ಸಂದೇಹಗೊಳ್ಳಲಿಲ್ಲ, ಲಿಂಗ ಹೋಯಿತ್ತು ಎಂದು ನುಡಿಯಲಿಲ್ಲ. ವೃತ್ತ ಗೋಳಕ ಗೋಮುಖ ಈ ತ್ರಿವಿಧ ಸ್ಥಾನದಲ್ಲಿ ಭಿನ್ನವಾಗಲು ಲಿಂಗದಲ್ಲಿ ಒಡವೆರೆಯಬೇಕು. ಹೀಂಗಲ್ಲದೆ ಸಂದೇಹವೆಂದು ಘಟವ ಹೊರೆವ ಅಜ್ಞಾನಿ ಕೋಟಿಜನ್ಮದಲ್ಲಿ ಶೂರಕನಾಗಿ ಹುಟ್ಟುವ. ಸಪ್ತಜನ್ಮದಲ್ಲಿ ಕುಷ್ಟನಾಗಿ ಹುಟ್ಟುವ. ದಾಸೀ ಗರ್ಭದಲ್ಲಿ ಹುಟ್ಟಿ, ಹೊಲೆಯರ ಎಂಜಲ ತಿಂದು, ಭವಭವದಲ್ಲಿ ಬಪ್ಪುದು ತಪ್ಪದು ಕಾಣಾ, ಚೆನ್ನಬಸವಣ್ಣ ಸಾಕ್ಷಿಯಾಗಿ ಅಮುಗೇಶ್ವರಲಿಂಗವೆ.