Index   ವಚನ - 13    Search  
 
ಅರೆಯಮೇಲೆ ಮಳೆ ಹೊಯಿದಂತೆ, ಅರಿವುಳ್ಳವರಲ್ಲಿ ಅಗಮ್ಯವುಂಟೆ? ವಾಯು ರೂಪಾದುದುಂಟೆ? ಸರ್ವಸಂಬಂಧವ ಅರಿದ ಶರಣನ ಕಣ್ಣಿನಲ್ಲಿ ಕಂಡವರುಂಟೆ? ತಿಪ್ಪೆಯ ಮೇಲಣ ಅರುವೆಯ ಸುಟ್ಟಡೆ ದಗ್ಧವಾದಂತೆ ಇರಬೇಕು. ಹೀಂಗಿರಬಲ್ಲಡೆ ಅನುಭಾವಿ ಎಂಬೆನಯ್ಯಾ, ಅಭೇದ್ಯರೆಂಬೆನಯ್ಯಾ, ಅಂಗಲಿಂಗ ಸಂಬಂಧಿಗಳೆಂಬೆನಯ್ಯಾ. ಲಿಂಗೈಕ್ಯರೆಂಬೆ ನಿಜವಿರಕ್ತರೆಂಬೆನಯ್ಯಾ. ಹೀಂಗಲ್ಲದೆ ಆತ್ಮತೇಜಕ್ಕೆ ಹೋರಾಡುವ ಘಾತಕರ ನಿಜವಿರಕ್ತರೆಂಬರೆ ಅಮುಗೇಶ್ವರಾ?