Index   ವಚನ - 14    Search  
 
ಆಕಾಶಕ್ಕೆ ಹಾರುವಂಗೆ ದೋಟಿಯ ಕೋಲ ಹಂಗೇತಕಯ್ಯಾ? ಭೂಮಿಯ ಸೋಂಕದೆ ನಡೆವವಂಗೆ ಭೂಮಿಯ ಹಂಗೇತಕಯ್ಯಾ? ತನ್ನ ತಾನರಿಯದವಂಗೆ ಬಿನ್ನಾಣಿಗಳ ಮಾತೇತಕಯ್ಯಾ? ಅಗಮ್ಯವಾಗಿ ಚರಿಸುವಂಗೆ ಅಂಗನೆಯರ ಹಂಗೇತಕಯ್ಯಾ? ಅಮುಗೇಶ್ವರಲಿಂಗವನರಿದ ಶರಣಂಗೆ ಕಾವಿ ಕಾಷಾಂಬರವ ಹೊದ್ದು ತಿರುಗುವ ಕರ್ಮಿಗಳ ಹಂಗೇತಕಯ್ಯಾ?