Index   ವಚನ - 16    Search  
 
ಆಸೆಯುಳ್ಳವಂಗೆ ಮಾಟಕೂಟವಲ್ಲದೆ, ನಿರಾಸೆಯುಳ್ಳವಂಗೆ ಮಾಟಕೂಟವೇಕೆ? ಮನಪರಿಣಾಮಿಗೆ ಮತ್ಸರವೇಕೆ? ಸುತ್ತಿದ ಮಾಯಾಪ್ರಪಂಚವ ಜರಿದವಂಗೆ ಅಂಗನೆಯರ ಹಿಂದು ಮುಂದೆ ತಿರುಗಲೇಕೆ? ಅಮುಗೇಶ್ವರನೆಂಬ ಲಿಂಗವನರಿದವಂಗೆ ಅಷ್ಟವಿಧಾರ್ಚನೆ ಷೋಡಶೋಪಚಾರದ ಹಂಗೇಕೆ?