Index   ವಚನ - 18    Search  
 
ಇಷ್ಟಲಿಂಗ ಭಿನ್ನವಾಗಲೊಡನೆ ತೆತ್ತಿಗರ ಕಂಡಲ್ಲಿ ವಸ್ತುವ ಬಿಡುವುದು. ತೆತ್ತಿರಗ ಕಾಣದಿರ್ದಡೆ ನೀರು ನೇಣು ವಿಷ ಔಷಧಂಗಳಲ್ಲಿ ವಸ್ತುವಿನೊಡನೆ ವಸ್ತುವ ಬಿಡಬೇಕು, ಇದಕ್ಕೆ ಸಂದೇಹವಿಲ್ಲ. ಆವಾವ ಪ್ರಕಾರದಲ್ಲಿ ಹೋದಡೂ ಸಂದೇಹವಿಲ್ಲ ಲಿಂಗೈಕ್ಯಂಗೆ. ಅಮುಗೇಶ್ವರಲಿಂಗವೆ, ನಿಮ್ಮ ಶರಣರು ಈರೇಳುಭುವನ ಹದಿನಾಲ್ಕುಲೋಕದಲ್ಲಿ ಲಿಂಗಸಹಿತ ಒಪ್ಪುವರು.