Index   ವಚನ - 20    Search  
 
ಉತ್ತಮ ತೇಜಿಗೆ ಚಬುಕಿನಲ್ಲಿ ತೆಗೆವರುಂಟೆ? ಪಟ್ಟಣಕ್ಕೆ ಒಡೆಯನಾದ ಬಳಿಕ, ಜಾತಿಗೋತ್ರವನರಸಲುಂಟೆ? ಪರಮಸುಜ್ಞಾನಿಗೆ ಪ್ರಾಣದ ಹಂಗುಂಟೆ? ಲಿಂಗವನಪ್ಪಿದ ಶರಣನ ಕಂಡಕಂಡವರು ಜರಿದಡೆ, ಸಂದೇಹವುಂಟೆ? ಇಹಲೋಕದವರು ಜರಿದರೆಂದು ವಿಪರೀತಗೊಳಲೇಕೆ? ಅಮುಗೇಶ್ವರಲಿಂಗವನರಿದ ಶರಣಂಗೆ ಆರು ಹರಸಿದಡೇನು, ಆರು ಹಳಿದಡೇನು?