Index   ವಚನ - 21    Search  
 
ಉತ್ತಮ ತೇಜಿಯಮರಿಗೆ ಸುಪ್ಪತ್ತಿಗೆಯಲ್ಲದೆ ಕತ್ತೆಯ ಮರಿಗೆ ಸುಪ್ಪತ್ತಿಗೆಯ ಹಾಸುವರೆ? ಅಜ್ಞಾನಿಗಳ ಹೃದಯದಲ್ಲಿ ಪರಮಾಮೃತವ ಸುರಿದಡೆ ಪರರ ಕಾಡಿ ಬೇಡದೆ ಮಾಣ್ಬರೆ? ಕುಂಜರನ ವೇಷವ ತೊಟ್ಟು ಹಂದಿಯಂತೆ ತಿರುಗುವ ಅಜ್ಞಾನಿಗಳನೇನೆಂಬೆ ಅಮುಗೇಶ್ವರಾ?