Index   ವಚನ - 26    Search  
 
ಎನ್ನ ಕಣ್ಣೊಳಗಣ ಕಟ್ಟಿಗೆಯ ಮುರಿವವರನಾರನೂ ಕಾಣೆ. ಎನ್ನ ಕಾಲೊಳಗಣ ಮುಳ್ಳ ತೆಗೆವವರನಾರನೂ ಕಾಣೆ. ಎನ್ನ ಅಂಗದಲ್ಲಿದ್ದ ಅಹಂಕಾರವ ಸುಡುವವರನಾರನೂ ಕಾಣೆ. ಎನ್ನ ಮನದಲ್ಲಿಪ್ಪ ಮಾಯಾ ಪ್ರಪಂಚುವ ಕೆಡಿಸುವವರನಾರನೂ ಕಾಣೆನಯ್ಯಾ. ಆದ್ಯರ ವೇದ್ಯರ ವಚನಂಗಳಿಂದ ಅರಿದೆವೆಂಬವರು ಅರಿಯಲಾರರು ನೋಡಾ. ಎನ್ನ ಕಣ್ಣೊಳಗಣ ಕಟ್ಟಿಗೆಯ ನಾನೆ ಮುರಿಯಬೇಕು. ಎನ್ನ ಕಾಲೊಳಗಣ ಮುಳ್ಳ ನಾನೆ ತೆಗೆಯಬೇಕು. ಎನ್ನ ಅಂಗದಲ್ಲಿಪ್ಪ ಅಹಂಕಾರವ ನಾನೆ ಸುಡಬೇಕು. ಎನ್ನ ಮನದಲ್ಲಿಪ್ಪ ಮಾಯಾ ಪ್ರಪಂಚವ ನಾನೆ ಕಳೆಯಬೇಕು. ಅಮುಗೇಶ್ವರಲಿಂಗವ ನಾನೆ ಅರಿಯಬೇಕು.